ಎಲ್ಲರಿಗೂ ನಮಸ್ಕಾರ….
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಈಗಾಗಲೇ ಸರ್ಕಾರದಿಂದ ಕೆಲವು ಹೊಸ ಹೊಸ ಯೋಜನೆಗಳನ್ನು ಮತ್ತು ಕೆಲವು ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿದೆ ಅಲ್ಲದೆ ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲೂ ಕೂಡ ಉತ್ತಮ ವಿದ್ಯಾಭ್ಯಾಸ ಪಡೆಯುತ್ತಿರುವ ಮತ್ತು ಅತಿ ಹೆಚ್ಚು ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಇದೀಗ ವಿದ್ಯಾರ್ಥಿಗಳ ಉತ್ತಮ ಶಿಕ್ಷಣ ಮತ್ತು ಮುಂದಿನ ವಿದ್ಯಾಭ್ಯಾಸಕ್ಕಾಗಿ ನೆರವಾಗಲು ಕರ್ನಾಟಕ ರಾಜ್ಯ ಸರ್ಕಾರದ Labour card scholarship 2023 ರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ನೀವು ಕೂಡ ಕಾಲೇಜು ವಿದ್ಯಾರ್ಥಿಗಳಾಗಿದ್ದಲ್ಲಿ ಅಥವಾ ನಿಮ್ಮ ಮನೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಇದ್ದಲ್ಲಿ ಈ 20,000 ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಲೇಖನವನ್ನು ಪೂರ್ತಿಯಾಗಿ ಓದಿ.
ಕಾಲೇಜು ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ.?
ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೇ ಸರ್ಕಾರದಿಂದ ಹಲವು ಮಾರ್ಗಗಳಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ ಅದರಲ್ಲಿ ಇದು ಕೂಡ ಒಂದು ಇದರಲ್ಲಿ ಕಾಲೇಜು ಓದುತ್ತಿರುವ ವಿದ್ಯಾರ್ಥಿಗಳಿಗೆ ಅಂದರೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾರ್ಥಿಗಳಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮತ್ತು ಉತ್ತಮ ಶಿಕ್ಷಣಕ್ಕಾಗಿ ಕೂಲಿ ಕಾರ್ಮಿಕರ ಕಾರ್ಡ್ ಹೊಂದಿರುವ ಬಡ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವಾಗಿದೆ.
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಸ್ವೀಕರಿಸಲಾಗುತ್ತಿದ್ದು ಈ ಯೋಜನೆಗೆ ಯಾರು ಅರ್ಹರು ಅರ್ಜಿ ಸಲ್ಲಿಕೆ ವಿಧಾನ ಎಷ್ಟು ಪ್ರೋತ್ಸಾಹ ಧನ ಸಹಾಯ ನೀಡಲಾಗುತ್ತದೆ ಎಂಬ ಇತ್ಯಾದಿ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ ನೀವು ಸಂಪೂರ್ಣವಾಗಿ ಓದಿ ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಿ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
Labour card scholarship 2023 ಮಾಹಿತಿ.?
ಈಗಾಗಲೇ ತಿಳಿಸಿದ ಹಾಗೆ ಕೂಲಿಕಾರ್ಮಿಕರ ಮಕ್ಕಳಿಗೆ ಅಂದರೆ ಬಡ ಮಕ್ಕಳಿಗೆ ನೀಡುವ ಶೈಕ್ಷಣಿಕ ಪ್ರೋತ್ಸಾಹ ಧನ ಆಗಿದ್ದು ಇದರಲ್ಲಿ ಎಸ್ ಎಸ್ ಎಲ್ ಸಿ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾದ ಪೂರ್ಣ ಮಾಹಿತಿ ಈ ಕೆಳಗಿನಂತಿದೆ.
- ಯೋಜನೆಯ ಹೆಸರು: ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ.
- ಪ್ರೋತ್ಸಾಹ ಧನ: 6,000 ಇಂದ ರೂ.20,000 ವರೆಗೆ
- ಈ ಪ್ರೋತ್ಸಾಹ ಧನಕ್ಕೆ ಅರ್ಹ ವಿದ್ಯಾರ್ಥಿಗಳು ಯಾರು: ಪಿಯುಸಿ, ಡಿಪ್ಲೋಮೋ, ಐಟಿಐ, ಪದವಿ, ಸ್ನಾತಕೋತಾರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ವಿದ್ಯಾರ್ಥಿಯ ಪೋಷಕರು ಕೂಲಿಕಾರ್ಮಿಕರ ಕಾರ್ಡ್ ಹೊಂದಿರಲೇಬೇಕು
- ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ
- ಕೂಲಿಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬದ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು
ಸರ್ಕಾರದ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ,?
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಯ ಮಂಡಳಿಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಪೋಷಕರ ಕೂಲಿಕಾರ್ಮಿಕರ ಇರಬೇಕಾಗುತ್ತದೆ
- ವಿದ್ಯಾರ್ಥಿಯ ಅಂಕದ ಅನುಸಾರ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ
- ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದ್ದು ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಕಾಲೇಜಿನಿಂದ ಸ್ಟಡಿ ಸರ್ಟಿಫಿಕೇಟ್ ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ನೀಡಬೇಕಾಗುತ್ತದೆ
- ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕಾಗಿ ಸೂಚನೆ ನೀಡಲಾಗಿದೆ
- ಇನ್ನು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. Klwbapps.karnataka.gov.in ಅಥವಾ klwb.karnataka.in ಗೂಗಲ್ ನಲ್ಲಿ ಟೈಪ್ ಮಾಡಿ ಸರ್ಚ್ ಮಾಡಿ ಇಲಾಖೆಯ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಅದರಲ್ಲಿ ಅರ್ಜಿ ಸಲ್ಲಿಸಬಹುದು.
- ಹಾಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಥವಾ ಕಾರ್ಮಿಕ ಕಲ್ಯಾಣ ಭವನಕ್ಕೆ ಭೇಟಿ ನೀಡಿ ಮಾಹಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ ಧನ್ಯವಾದಗಳು ..
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ