ಎಲ್ಲರಿಗೂ ನಮಸ್ಕಾರ..
ಸ್ವಂತ ಮನೆ ಕಟ್ಟಿಸುವ ಆಸೆ ಹೊಂದಿರುವ ಪ್ರತಿಯೊಬ್ಬ ಬಡವರಿಗೂ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಗುತ್ತಾ ಇದೆ, ಹೌದು ಬಾಡಿಗೆ ಮನೆಯಲ್ಲಿ ಅಥವಾ ಗೂಡಿಸಲಿನಲ್ಲಿ ವಾಸಿಸುತ್ತಿರುವ ಜನರಿಗಾಗಿ ಸರ್ಕಾರದಿಂದ ಉಚಿತ ವಸತಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಅಡಿಯಲ್ಲಿ ಬಡವರು ಸ್ವಂತ ಮನೆ ಕಟ್ಟಿಸಿಕೊಳ್ಳಲು ಸಹಾಯಧನವನ್ನು ಪಡೆಯಬಹುದಾಗಿದ್ದು ಸದ್ಯ ಇದೀಗ ಸರ್ಕಾರದ ಸ್ವಂತ ಮನೆ ನಿರ್ಮಾಣದ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಹಣವನ್ನು ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರದಿಂದ ಬಡವರಿಗಾಗಿ ಮನೆ ನಿರ್ಮಾಣ ಮಾಡಲು ಪ್ರದಾನ ಮಂತ್ರಿ ಆವಾಜ್ ಯೋಜನೆಯನ್ನು ಜಾರಿಗೆ ತರಲಾಗಿದೆ ಈಗಾಗಲೇ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರುವ 1.9 ಕೋಟಿಗೂ ಹೆಚ್ಚು ಮನೆಗಳು ಮಂಜುರಾಗಿದ್ದು ಸದ್ಯ ಇದೀಗ 75 ಲಕ್ಷ ಮನೆಗಳನ್ನು ವಿತರಣೆ ಮಾಡಲಾಗುತ್ತಿದೆ ಹಾಗಾಗಿ ರಾಜ್ಯ ಸರ್ಕಾರದಿಂದಲೂ ಕೂಡ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ರಾಜ್ಯದ ಬಡವರಿಗಾಗಿ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ನೀವು ಕೂಡ ಸ್ವಂತ ಮನೆ ಕಟ್ಟಿಸುವ ಯೋಚನೆಯಲ್ಲಿ ಇದ್ದರೆ ಸರ್ಕಾರದಿಂದ ಈ ಸಹಾಯಧನವನ್ನು ಪಡೆಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸ್ವಂತ ಮನೆ ಕಟ್ಟಿಸುವ ಆಸೆ ಹೊಂದಿರುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ.!
ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದು ಈಗಾಗಲೇ ಚುನಾವಣೆ ಸಮಯದಲ್ಲಿ ನೀಡಿದ್ದ ಕೆಲವು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿದೆ ಇನ್ನು ರಾಜ್ಯದ ಬಡವರಿಗಾಗಿ ಸರ್ಕಾರದಿಂದ ಮತ್ತೊಂದು ಯೋಜನೆಗೆ ಅರ್ಜಿಯನ್ನು ಸ್ವೀಕರಿಸಲು ಮುಂದಾಗಿದ್ದು ಈಗಾಗಲೇ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಅವಾಜ್ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿಗಳನ್ನು ಸ್ವೀಕರಿಸಿದ್ದು ಇದೀಗ ರಾಜ್ಯದ ಕಾಂಗ್ರೆಸ್ ಪಕ್ಷವು ಕೂಡ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಸಾಕಷ್ಟು ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನ ನೀಡಲು ನಿರ್ಧರಿಸಿದ್ದು. ಸಹಾಯಧನ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.?
ಹೌದು ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಬಡವರ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಸರ್ಕಾರದಿಂದ ಅರ್ಜಿಯನ್ನು ಸ್ವೀಕರಿಸಲು ಮುಂದಾಗಿದೆ ಈ ಯೋಜನೆ ಕೇವಲ ನಗರ ವಾಸಿಗಳಿಗೆ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಎಲ್ಲರಿಗೂ ಕೂಡ ಈ ಯೋಜನೆಯ ಮೂಲಕ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆದುಕೊಳ್ಳಲು ಈ ಯೋಜನೆ ಸಹಕಾರಿಯಾಗಿದೆ,
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?
ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ವಸತಿ ಯೋಜನೆ ಬಹಳ ವರ್ಷಗಳಿಂದ ಪ್ರಚಲಿತದಲ್ಲಿದ್ದು ಈ ಯೋಜನೆಯಲ್ಲಿ ಸಾಕಷ್ಟು ಮನೆಗಳು ನಿರ್ಮಾಣವಾಗಿವೆ ಈ ಯೋಜನೆಯಲ್ಲಿ 1BHK ಮತ್ತು 2BHK ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದಾಗಿದ್ದು.
- ಮೊದಲನೆಯದಾಗಿ ರಾಜೀವ್ ಗಾಂಧಿ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು https://ashraya.karnataka.gov.in/index.aspx ಲಿಂಕ್ ಮೇಲೆ ಕ್ಲಿಕ್ ಮಾಡಿ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
- ಇನ್ನು ಸ್ವಂತ ಮನೆ ನಿರ್ಮಾಣಕ್ಕೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಆ ಊರಿನಲ್ಲಿ ಐದು ವರ್ಷ ವಾಸವಾಗಿ ಇರಬೇಕು.
- ಇನ್ನು ನಗರ ಪ್ರದೇಶದ ವಾಸಿ ಆಗಿದ್ದರೆ ಈಗಾಗಲೇ ತಿಳಿಸಿದ ಹಾಗೆ ಕಳೆದ ಐದು ವರ್ಷಗಳಿಂದ ನನ್ನ ನಗರದಲ್ಲಿಯೇ ವಾಸವಾಗಿರಬೇಕು ಅಂತವರಿಗೆ ಮಾತ್ರ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ.
- ಲಿಂಕ್ ಮೂಲಕ ವೆಬ್ ಸೈಟ್ ಗೆ ಭೇಟಿ ನೀಡಿ ಇದರಲ್ಲಿ 1BHK ಮತ್ತು 2BHK ಎಂಬ ಆಯ್ಕೆ ಇರುತ್ತದೆ ಆಯ್ಕೆ ಮಾಡಿ ಮುಂದುವರೆಯಬೇಕು
- ನಂತರ ನಿಮ್ಮ ಮನೆ ನಿರ್ಮಾಣದ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು.
- ನಂತರ ನಿಮ್ಮ ಸದ್ಯದ ವಾಸ ಸ್ಥಳ ಮತ್ತು ಯೋಜನೆಗೆ ಅಗತ್ಯವಿರುವ ಕೆಲವು ದಾಖಲೆಗಳನ್ನು ನೀವು ಇದರಲ್ಲಿ ನೀಡಬೇಕು ಇದರಲ್ಲಿ ಕೆಲವೊಂದು ಹಂತಗಳಲ್ಲಿ ಮಾಹಿತಿಗಳನ್ನು ಪಡೆಯಲಾಗುತ್ತದೆ ಎಲ್ಲ ಮಾಹಿತಿಗಳನ್ನು ನೀಡಿದ ಬಳಿಕ ಅರ್ಜಿ ಸಲ್ಲಿಕೆ ಆಗುತ್ತದೆ
- ನಂತರ ನೀವು ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಲಾಗುತ್ತದೆ ನೀವು ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಹರಾಗಿದ್ದರೆ ನಿಮಗೆ ಸ್ವಂತ ಮನೆ ನಿರ್ಮಾಣದ ಅರ್ಜಿ ಮಂಜೂರು ಆಗುತ್ತದೆ ಈಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ