SSLC, PUC ವಿದ್ಯಾರ್ಥಿಗಳ ಗಮನಕ್ಕೆ ಪ್ಯಾರಾ ಮೆಡಿಕಲ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.!
2023 24 ನೇ ಸಾಲಿನ ಪ್ಯಾರಾ ಮೆಡಿಕಲ್ ಕೋರ್ಸ್ ಗಳಿಗೆ ಅರೆ ವೈದ್ಯಕೀಯ ಮಂಡಳಿ ಕಡೆಯಿಂದ ಅರ್ಜಿಗಳನ್ನು ಆಹ್ವಾನಿಸಿದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿ ಮಾಡಿದೆ. ಸದ್ಯ ಈಗಾಗಲೇ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಫಲಿತಾಂಶ ಬಿಡುಗಡೆಯಾಗಿ ಹೆಚ್ಚು ದಿನಗಳು ಕಳೆದಿದೆ ಅಲ್ಲದೆ ಈಗಾಗಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು sslc puc ಪಾಸ್ ಆಗಿರುವ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ಕಾಲೇಜುಗಳಿಗೆ ಅರ್ಜಿ ಸಲ್ಲಿಸಿ ಈಗಾಗಲೇ ಸುಮಾರು 80ರಷ್ಟು ವಿದ್ಯಾರ್ಥಿಗಳು ಕಾಲೇಜುಗಳಿಗೆ ಪ್ರವೇಶಿಸುತ್ತಿದ್ದಾರೆ ಆದರೆ ಕೆಲವು ವಿದ್ಯಾರ್ಥಿಗಳು ಪ್ಯಾರಾ ಮೆಡಿಕಲ್ ಮಾಡುವ ಕನಸು ಹೊಂದಿದ್ದು ಇವರಿಗೂ ಪ್ಯಾರಾಮೆಡಿಕಲ್ ಕೋರ್ಸ್ನ ಅರ್ಜಿ ಬಿಡುಗಡೆಗೆ ಕಾಯುತ್ತಿದ್ದು ಇದೀಗ ಅರೆ ವೈದ್ಯಕೀಯ ಮಂಡಳಿ ಕಡೆಯಿಂದ ಎಸ್ ಎಸ್ ಎಲ್ ಸಿ ಪಿಯುಸಿ ಪಾಸ್ ಆಗಿರುವ ವಿಜ್ಞಾನದ ವಿಭಾಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಪ್ಯಾರಾ ಮೆಡಿಕಲ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕರ್ನಾಟಕ ರಾಜ್ಯದ ಅರೇವದ್ಯಕೀಯ ಮಂಡಳಿ ವತಿಯಿಂದ 2023 24ನೇ ಸಾಲಿನ ಪ್ಯಾರಾ ಮೆಡಿಕಲ್ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ವ್ಯಕ್ತಿಗಳು ಆನ್ಲೈನ್ ಮೂಲಕ ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳು ಆರಂಭವಾಗಿದ್ದು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಆಸಕ್ತಿ ಇದ್ದು ಪ್ಯಾರಾಮೆಡಿಕಲ್ ಕೋರ್ಸ್ ತೆಗೆದುಕೊಳ್ಳಬೇಕು ಎಂಬ ಕನಸು ಕಟ್ಟಿರುವ ವಿದ್ಯಾರ್ಥಿಗಳಿಗೆ ಇದೀಗ ಅರೆ ವೈದ್ಯಕೀಯ ಮಂಡಳಿ ಕಡೆಯಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಅಂದರೆ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಇದೇ ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ.
ಇದನ್ನು ಓದಿ: SSLC supplementary exam result: SSLC ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್. ಈ ರೀತಿ ರಿಸಲ್ಟ್ ಚೆಕ್ ಮಾಡಿ.!
ಪ್ಯಾರಾ ಮೆಡಿಕಲ್ ಕೋರ್ಸ್ ಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ
ಈಗಾಗಲೇ ಅರೆ ವೈದ್ಯಕೀಯ ಮಂಡಳಿ ವತಿಯಿಂದ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಅಧಿಕಾರಕ್ಕೆ ಎಸೆಸೆಲ್ಸಿ ಮತ್ತು ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಜೂನ್ ಒಂದರಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಇದೀಗ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ ಆಸಕ್ತ ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲದೆ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಗಳು ಅದರ ಜೊತೆಗೆ ಮೂರು ತಿಂಗಳ ಇಂಟರ್ನ್ಶಿಪ್ ಇರುತ್ತದೆ ಎಸ್ ಎಸ್ ಎಲ್ ಸಿ ನಂತರ ಈ ಪಾರ ಮೆಡಿಕಲ್ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮೂರು ವರ್ಷಗಳು ಅದರ ಜೊತೆಗೆ ಮೂರು ತಿಂಗಳ ಇಂಟರ್ನ್ಶಿಪ್ ಇರುತ್ತದೆ. ಪ್ರವೇಶಾತಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರದ ಅಫೀಸಿಯಲ್ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು ಅಲ್ಲದೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರೆ ವೈದ್ಯಕೀಯ ಪ್ರಾಧಿಕಾರದಲ್ಲಿ ಲಭ್ಯವಿರುವ ಕೋರ್ಸ್ಗಳು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸ್ ಆಗಿರುವ ಯಾವುದೇ ವಿದ್ಯಾರ್ಥಿಗಳಾದರು ಅರೆ ವೈದ್ಯಕೀಯದಲ್ಲಿ ಆಸಕ್ತಿ ಇದ್ದಲ್ಲಿ ಅರ್ಜಿ ಸಲ್ಲಿಸಿ ಪ್ಯಾರಾಮೆಡಿಕಲ್ ಮತ್ತು ಇನ್ನಿತರ ಕೋರ್ಸ್ಗಳ ಬಗ್ಗೆ ಅಧ್ಯಯನ ಮಾಡಬಹುದು ಈಗಾಗಲೇ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಪಾಸ್ ಆಗಿ ಅರೆವೈದ್ಯಕೀಯದಲ್ಲಿ ಸೇರಬೇಕು ಎಂದು ಅಂದುಕೊಂಡಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಈ ಬಗ್ಗೆ ಎಲ್ಲಾ ಮಾಹಿತಿಗಳು ಇರುತ್ತದೆ.
- ಡಿಪ್ಲೋಮೋ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ.
- ಡಿಪ್ಲೋಮಾ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ
- ಡಿಪ್ಲೋಮಾ ಇನ್ ಹೆಲ್ತ್ ಇನ್ಸ್ಪೆಕ್ಟರ್
- ಡಿಪ್ಲೋಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅನಸ್ತೇಶಿಯ ಟೆಕ್ನಾಲಜಿ
- ಡಿಪ್ಲೋಮ ಡಯಾಲಿಸಿಸ್ ಟೆಕ್ನಾಲಜಿ
- ಡಿಪ್ಲೋಮಾ ಇನ್ ಆಪ್ತಮಿಕ್ ಟೆಕ್ನಾಲಜಿ
- ಡಿಪ್ಲೋಮಾ ಇನ್ ಡೆಂಟಲ್ ಮೆಕ್ಯಾನಿಕ್
- ಡಿಪ್ಲೋಮಾ ಇನ್ ಡೆಂಟಲ್ ಹೈಜಿನ್
ಇದನ್ನು ಓದಿ: SSLC supplementary exam result: SSLC ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್. ಈ ರೀತಿ ರಿಸಲ್ಟ್ ಚೆಕ್ ಮಾಡಿ.!
ಈ ರೀತಿ ಅರೆ ವೈದ್ಯಕೀಯ ಮಂಡಳಿಯು ಹಲವು ಕೋರ್ಸ್ ಗಳನ್ನು ಹೊಂದಿದ್ದು ಇದೀಗ ಜೂನ್ ಒಂದರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು ಅದರಲ್ಲೂ ವಿಜ್ಞಾನ ವಿಭಾಗದಲ್ಲಿ ಪಾಸಾಗಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರ್ಹತೆ ನೀಡಿದ್ದು ಇದೆ ಜೂನ್ 30ರ ಒಳಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಂಡಳಿ ಅವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ಅರ್ಜಿದಾರರ ಫೋಟೋ ಮತ್ತು ಸಹಿ
- ಎಸ್ ಎಸ್ ಎಲ್ ಸಿ ಪಿಯುಸಿ ಮಾಸ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಮತ್ತು ಇನ್ನಿತರ ಕೆಲವು ದಾಖಲಾತಿಗಳನ್ನು ಅರ್ಜಿ ಸಲ್ಲಿಸುವಾಗ ಕೇಳಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಶುಲ್ಕ
ಈಗಾಗಲೇ ಅರೆ ವೈದ್ಯಕೀಯ ಮಂಡಳಿ ಕಡೆಯಿಂದ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ದಿನಾಂಕವಾಗಿದ್ದು ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://www.pmbkarnataka.org ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ
ಸಾಮಾನ್ಯ ಅಭ್ಯರ್ಥಿಗಳಿಗೆ 400 ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ