ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಸಿಎಂ ಸೂಚನೆ. ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ.
ಕರ್ನಾಟಕ ರಾಜ್ಯ ಸರ್ಕಾರದಿಂದ ಇದೀಗ ವಿದ್ಯಾರ್ಥಿಗಳಿಗೆ ಈ ಬಾರಿ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ಹಾದಿ ಸೂಚನೆ ಹೊರಡಿಸಲಾಗಿದೆ. ಹೌದು ಈ ಇಂದಿನ ಸರ್ಕಾರದ ಕಡೆಯಿಂದಲೂ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದ್ದು ಇದೀಗ ರಾಜ್ಯದ ಹೊಸ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಹ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಸದ್ಯ ಸ್ನಾತಕೋತಾರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ,
ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಘೋಷಣೆ.
ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ಸರ್ಕಾರದಿಂದ ನೀಡಿದೆ. ಹೌದು ಆಗಸ್ಟ್ 21ರಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಟ್ವೀಟ್ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದ್ದು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಓದಿಗೆ ಸಹಾಯವಾಗಲೆಂದು ಹಾಗೂ ಉನ್ನತ ಶಿಕ್ಷಣಕ್ಕಾಗಿ ಆಸರೆಯಾಗಲಿ ಎಂದು ಈ ಉಚಿತ ಲ್ಯಾಪ್ಟಾಪ್ ವಿತರಣೆಯ ಘೋಷಣೆಯನ್ನು ಮಾಡಲಾಗಿದೆ.
ಯಾವೆಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ.
ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಟ್ವಿಟ್ ನಲ್ಲಿ ತಿಳಿಸಿರುವ ಹಾಗೆ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಎಸ್. ಸಿ.ಎಸ್.ಪಿ ./ಟಿ.ಎಸ್.ಪಿ ಯೋಜನೆ ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಲ್ಲದೆ ಲ್ಯಾಪ್ಟಾಪ್ ವಿತರಿಸುವ ಸಂಬಂಧ ಎಸ್. ಸಿ.ಎಸ್.ಪಿ ./ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ.
ಅಲ್ಲದೆ ರಾಜ್ಯ ಸರ್ಕಾರದಿಂದ ವಿಶ್ವವಿದ್ಯಾಲಯಗಳಲ್ಲಿ ಇರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ವಿತರಿಸಬೇಕಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಾಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಇಂಜಿನಿಯರಿಂಗ್ ಪದವಿತರರಿಗೆ ಹೆಚ್ಚಿನ ಉದ್ಯೋಗವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಹೋತ್ತು ನೀಡಬೇಕೆಂದು ಹಿಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಅಲ್ಲದೆ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ ಎಂಬ ಬಗ್ಗೆ ಮುಖ್ಯಮಂತ್ರಿಗಳಿಂದ ಅಧಿಸೂಚನೆ ಹೊರಬಂದಿದ್ದು ಇದೀಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ.
ವಿಶ್ವವಿದ್ಯಾಲಯದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಯಾವಾಗ.
ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆಯಷ್ಟೇ ಅಂದರೆ ಆಗಸ್ಟ್ 21ನೇ ದಿನಾಂಕದಲ್ಲಷ್ಟೇ ಟ್ವಿಟ್ ಮೂಲಕ ಅಧಿಕಾರಿಗಳಿಗೆ ನೀಡಿರುವ ಆದೇಶದ ಬಗ್ಗೆ ತಿಳಿಸಿದ್ದು ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಶೀಘ್ರದಲ್ಲಿ 230 ಕೋಟಿ ವೆಚ್ಚದಲ್ಲಿ ಉಚಿತ ಲ್ಯಾಪ್ಟಾಪ್ ವಿತರಣೆಗೆ ಮುಂದಾಗಿದ್ದು ಮುಂದಿನ ಕೆಲವು ದಿನಗಳಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವುದಾಗಿ ಮಾತ್ರ ಸರ್ಕಾರ ಭರವಸೆ ನೀಡಿದೆ ಅಲ್ಲದೆ ಇಂತಹದ್ದೇ ನಿರ್ದಿಷ್ಟ ದಿನಾಂಕದಲ್ಲಿ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಸಿಗದೇರುವುದರಿಂದ ವಿದ್ಯಾರ್ಥಿಗಳು ಸರ್ಕಾರದ ಮುಂದಿನ ಆದೇಶದ ವರೆಗೆ ಕಾದು ನೋಡಬೇಕಾಗಿದೆ,
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.
ಸದ್ಯ ಈಗಾಗಲೇ ರಾಜ್ಯ ಸರ್ಕಾರದಿಂದ ಸಂಬಂಧ ಪಟ್ಟ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಉಚಿತ ಲ್ಯಾಪ್ಟಾಪ್ ವಿತರಣೆ ಬಗ್ಗೆ ಆದೇಶ ಹೊರಡಿಸಿದ್ದು ಈಗಾಗಲೇ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಎಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಟ್ಟಿಯನ್ನು ತೆಗೆದುಕೊಂಡಿದ್ದು ಅದರ ಕ್ರಮವೇ ವಿದ್ಯಾರ್ಥಿಗಳಿಗೆ ಅವರ ಕಾಲೇಜುಗಳಿಂದಲೇ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ ಇದಕ್ಕೆ ವಿದ್ಯಾರ್ಥಿಗಳ ಕಾಲೇಜಿನ ಕಡೆಯಿಂದಲೇ ಇಂತಿಷ್ಟು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಬೇಕೆಂದು ಸರ್ಕಾರಕ್ಕೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತದೆ ಧನ್ಯವಾದಗಳು.