ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಬಿಗ್ ಶಾಪ್ ನೀಡಿದ್ದು ಶೀಘ್ರವೇ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 10ಪಟ್ಟು ಹೆಚ್ಚಳ ಮಾಡಲು ಮುಂದಾಗಿದೆ, ಜನನ ಮತ್ತು ಮರಣ ಪ್ರಮಾಣ ಪತ್ರ ಪ್ರತಿಯೊಬ್ಬರಿಗೂ ಕೂಡ ಮುಖ್ಯವಾದ ದಾಖಲೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ಕೆಲವು ಹೊಸ ನಿಯಮಗಳನ್ನು ಸರ್ಕಾರದಿಂದ ಜಾರಿ ಮಾಡಲಾಗಿತ್ತು ಆದರೆ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ದುಪ್ಪಟ್ಟು ಹಣ ನೀಡಬೇಕಾಗುವ ಸಾಧ್ಯತೆ ಉಂಟಾಗಲಿದೆ, ಹಾಗಾದ್ರೆ ಸರ್ಕಾರದಿಂದ ಜನನ ಮತ್ತು ಮರಣ ಪ್ರಮಾಣ ಪತ್ರಕ್ಕೆ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿದೆ ಯಾವ ಕಾರಣದಿಂದ ಶುಲ್ಕವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕ 10 ಪಟ್ಟು ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ.?
ರಾಜ್ಯ ಸರ್ಕಾರವು ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಲು ಈಗಿರುವ ಶುಲ್ಕವನ್ನು 10 ಪಟ್ಟು ಹೆಚ್ಚಿಸಲು ಸಿದ್ಧತೆ ನಡೆಸುತ್ತಿದೆ ಈಗಾಗಲೇ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಶುಲ್ಕ ಪರಿಷ್ಕರಣೆ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸರ್ಕಾರ ಸೂಚನೆ ನೀಡಿದೆ. ಹೌದು ಈಗಾಗಲೇ ಸರ್ಕಾರದಿಂದ ಈ ಒಂದು ಜನನ ಮತ್ತು ಮರಣ ಪ್ರಮಾಣ ಪತ್ರದ ವಿಷಯವಾಗಿ ಕೆಲವು ಬದಲಾವಣೆಗಳನ್ನು ತಂದಿದೆ ಅದರಂತೆ ಈಗಾಗಲೇ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಪಡೆಯುವುದು ಮತ್ತಷ್ಟು ಸಮಸ್ಯೆಯಾಗಿದೆ ಇದರ ಬೆನ್ನಲ್ಲೇ ಪ್ರಮಾಣ ಪತ್ರ ಪಡೆಯಲು ಮತ್ತಷ್ಟು ಹಣ ದುಪ್ಪಟ್ಟು ಮಾಡಲು ಅಂದರೆ ಹೆಚ್ಚಿನ ಶು ಸರ್ಕಾರ ನಿರ್ಧರಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಜನನ ಮತ್ತು ಮರಣ ಪ್ರಮಾಣ ಪತ್ರದ ದುಪ್ಪಟ್ಟು ಶುಲ್ಕ ಎಷ್ಟು.?
ಈಗಾಗಲೇ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಸರ್ಕಾರ ಕೆಲವು ನಿಯಮ ಮತ್ತು ನಿಬಂಧನೆಗಳನ್ನು ಜನರಿಗೆ ಏರಿದೆ ಅದೇ 21 ದಿನಗಳ ಒಳಗಾಗಿ ಜನನ ಅಥವಾ ಮರಣ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳತಕ್ಕದ್ದು ಎಂಬ ಕೆಲವು ನಿಯಮಗಳನ್ನು ತಂದಿದೆ ಇದರ ಜೊತೆಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮಾಣ ಪತ್ರದ ಬೆಲೆ ಕೂಡ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು ಯಾವುದೇ ಶುಲ್ಕ ಇಲ್ಲದೆ 21 ದಿನಗಳ ಒಳಗಾಗಿ ಪಡೆದುಕೊಳ್ಳುತ್ತಿದ್ದ ಪ್ರಮಾಣ ಪತ್ರಕ್ಕೆ ನೂರು ರೂಪಾಯಿ ಶುಲ್ಕವನ್ನು ಇನ್ನು ಮುಂದೆ ನಿಗದಿಪಡಿಸಲಾಗುತ್ತದೆ ಅದೇ ರೀತಿ 21 ದಿನದ ನಂತರದಲ್ಲಿ ಅಂದರೆ 30 ದಿನದ ಒಳಗಾಗಿ ಜನನ ಅಥವಾ ಮರಣ ಪ್ರಮಾಣ ಪತ್ರ ಪಡೆಯುವುದಾದರೆ 200 ರಿಂದ 300 ರೂಪಾಯಿಗಳವರೆಗೆ ಶುಲ್ಕವನ್ನು ವಿಧಿಸಲಾಗುತ್ತದೆ ಅದೇ ರೀತಿ ಒಂದು ತಿಂಗಳಿನಿಂದ ಆರು ತಿಂಗಳ ಒಳಗಾಗಿ ಪ್ರಮಾಣ ಪತ್ರ ಪಡೆಯುವುದಾದರೆ 500 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ ಕೊನೆಯದಾಗಿ ಐದು ವರ್ಷದ ಒಳಗೆ ಜನನ ಅಥವಾ ಮರಣ ಪ್ರಮಾಣ ಪತ್ರವನ್ನು ಪಡೆಯುವುದಾದರೆ ಒಂದು ಸಾವಿರದಿಂದ ಎರಡು ಸಾವಿರದವರೆಗೆ ಶುಲ್ಕವನ್ನು ಕಟ್ಟಬೇಕಾಗುತ್ತದೆ ಎಂದು ಹೊಸ ಶುಲ್ಕವನ್ನು ಸರ್ಕಾರ ನಿಗದಿಪಡಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಜನನ ಮತ್ತು ಮರಣ ಪ್ರಮಾಣ ಪತ್ರಕ್ಕೆ ಶುಲ್ಕ ಹೆಚ್ಚಿಸಲು ಕಾರಣ ಏನು.?
ಸರ್ಕಾರದಿಂದ ಜನನ ಮತ್ತು ಮರಣ ಪ್ರಮಾಣ ಪತ್ರಗಳಲ್ಲಿ ನಡೆಯುತ್ತಿದ್ದ ಅಕ್ರಮ ತಪ್ಪುಗಳನ್ನು ತಡೆ ಹಿಡಿಯಲು ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗಿತ್ತು. ಆದರೆ ಶುಲ್ಕದಲ್ಲಿ ಯಾವುದೇ ರೀತಿಯ ವ್ಯತ್ಯಾಸಗಳನ್ನು ಸರ್ಕಾರದಿಂದ ಮಾಡಿರುವುದಿಲ್ಲ ಹಾಗಾಗಿ ಅದೇ ತಪ್ಪುಗಳು ಮತ್ತು ಮುಂದುವರಿಯುತ್ತಿದ್ದರಿಂದ ಆ ತಪ್ಪುಗಳನ್ನು ಕಡಿಮೆ ಮಾಡಲು ಜನನ ಮತ್ತು ಮರಣ ಪ್ರಮಾಣದ ಶುಲ್ಕವನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದ್ದು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಶೀಘ್ರದಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕದ ದರ ಹೆಚ್ಚಾಗಲಿದೆ ಒಂದು ವೇಳೆ ನಿಮ್ಮ ಮನೆಯಲ್ಲಿ ಯಾರಿಗಾದರೂ ಜನನ ಅಥವಾ ಮರಣ ಪ್ರಮಾಣ ಪತ್ರ ತೆಗೆದುಕೊಳ್ಳಬೇಕು ಎಂದು ಯೋಚಿಸಿದ್ದರೆ ಈಗಲೇ ಪ್ರಮಾಣ ಪತ್ರ ಪಡೆಯುವುದು ಸೂಕ್ತ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ