Gruh Lakshmi scheme: ರಾಜ್ಯ ಸರ್ಕಾರದಿಂದ 2 ಲಕ್ಷಕ್ಕಿಂತ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ.! ಈಗಲೇ ಸ್ಟೇಟಸ್ ಚೆಕ್ ಮಾಡಿ.?
ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನೀಡಿದ್ದು ಅದರಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿ ಮಾಡಿದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ದಂತೆ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು ಇದೀಗ ಈ ಯೋಜನೆಯಲ್ಲಿ ಕೆಲವು ಹೊಸ ಬದಲಾವಣೆಗಳಿಗೆ ಸರ್ಕಾರ ಮುಂದಾಗಿದ್ದು ಇದೀಗ ಯೋಜನೆಯ ಹೊಸ ನಿಯಮದಂತೆ ಕೆಲವು ಫಲಾನುಭವಿಗಳ ಹೆಸರನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲಾಗಿದೆ, ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆಗಿದ್ದು ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದರೆ ಇನ್ನು ಮುಂದೆ ನಿಮಗೆ ಗೃಹಲಕ್ಷ್ಮಿ ಹಣ ಬರಲಿದೆಯೇ ಎಂದು ಸ್ಟೇಟಸ್ ಚೆಕ್ ಮಾಡುವುದು ಮುಖ್ಯವಾಗಿದ್ದು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯಲ್ಲಿ ಸರ್ಕಾರದಿಂದ ಹೊಸ ನಿಯಮ.
ಕರ್ನಾಟಕ ರಾಜ್ಯ ಮಹಿಳೆಯರಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು ಈಗಾಗಲೇ 11 ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗಿದೆ ಸದ್ಯ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ಬದಲಾವಣೆಗೆ ಮುಂದಾಗಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಕೆಲವು ಹೆಸರುಗಳನ್ನು ತೆಗೆದುಹಾಕಲು ಮುಂದಾಗಿದೆ.
ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ಪಡೆಯುತ್ತಿದ್ದು ಇದರಲ್ಲಿ ಯೋಜನೆಯ ಹೊಸ ನಿಯಮದಂತೆ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಮತ್ತು ಕುಟುಂಬದಲ್ಲಿ ಯಾವುದೇ ಸದಸ್ಯ ಸರ್ಕಾರಿ ಉದ್ಯೋಗ ದಲ್ಲಿ ಇರುವ ಮಹಿಳೆಯರಿಗೆ ಯೋಜನೆಯ ಹಣ ರದ್ದಾಗಲಿದ್ದು ಇದೀಗ ಹಲವು ಫಲಾನುಭವಿಗಳ ಹೆಸರನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಿದೆ.
ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳ ಹೆಸರು ರದ್ದು.
ಹೌದು ಈಗಾಗಲೇ ತಿಳಿಸಿದ ಹಾಗೆ ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತಿದ್ದು ಇದೀಗ ಯೋಜನೆಯ ಹೊಸ ನಿಯಮದ ಮೇಲೆ ಕೆಲವು ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಮುಂದಾಗಿದೆ ಕುಟುಂಬದ ಯಾವುದೇ ಸದಸ್ಯ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ, ಕುಟುಂಬದಲ್ಲಿ ಸರ್ಕಾರಿ ಉದ್ಯೋಗವನ್ನು ಹೊಂದಿದ್ದರೆ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿಲ್ಲದಿದ್ದಂತಹ ಫಲಾನುಭವಿಗಳ ಹೆಸರನ್ನು ಯೋಜನೆಯಿಂದ ತೆಗೆದುಹಾಕಲು ಮುಂದಾಗಿದ್ದು ಸದ್ಯ ಈಗಾಗಲೇ ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳ ಹೆಸರನ್ನು ರದ್ದು ಮಾಡಲಾಗಿದೆ ನಿಮ್ಮ ಹೆಸರು ಕೂಡ ಈ ಪಟ್ಟಿಯಲ್ಲಿ ಇದ್ದರೆ ನಿಮಗೂ ಕೂಡ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಾಡು ಸಿಗುವುದಿಲ್ಲ ಹಾಗಾಗಿ ನಿಮ್ಮ ಯೋಜನೆಯ ಫಲಾನುಭವಿ ಸ್ಟೇಟಸ್ ಅನ್ನು ಚೆಕ್ ಮಾಡಿ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸ್ಟೇಟಸ್ ಚೆಕ್ ಮಾಡುವ ವಿಧಾನ.?
ಗೃಹಲಕ್ಷ್ಮಿ ಯೋಜನೆಯೆಲ್ಲಿ ಈಗಾಗಲೇ ಮಹಿಳೆಯರಿಗೆ ಸುಮಾರು 11 ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು ಇದೀಗ ಒಂದು ವರ್ಷದ ಬಳಿಕ ಕೆಲವು ಫಲಾನುಭವಿಗಳ ಹೆಸರನ್ನು ಯೋಜನೆಯಿಂದ ತೆಗೆದು ಹಾಕಲು ಮುಂದಾಗಿದೆ ಹಾಗಾಗಿ ಈಗಾಗಲೇ ಎರಡು ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳ ಹೆಸರನ್ನು ಯೋಜನೆಯ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು ನಿಮ್ಮ ಹೆಸರು ಕೂಡ ಈ ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳುವುದು ಉತ್ತಮ ಒಂದು ವೇಳೆ ನಿಮ್ಮ ಹೆಸರು ಈ ಯೋಜನೆಯ ಪಟ್ಟಿಯಲ್ಲಿ ಇಲ್ಲದಿದ್ದರೆ ನಿಮಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ.
- ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಚೆಕ್ ಮಾಡಲು ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು
- ವೆಬ್ಸೈಟ್ ಭೇಟಿ ನೀಡಲು ಈ ಲಿಂಕ್ ಬೆಲೆ ಕ್ಲಿಕ್ ಮಾಡಿ. https://sevasindhugs.karnataka.gov.in/
- ನಂತರ ಗ್ಯಾರೆಂಟಿ ಯೋಜನೆಗಳ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ
- ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಮೇಲೆ ಕ್ಲಿಕ್ ಮಾಡಿ
- ನಂತರ ಯೋಜನೆಯ ಫಲಾನುಭವಿಗಳು ತಮ್ಮ ನೋಂದಣಿಯ ವೇಳಾಪಟ್ಟಿಯನ್ನು ಪರಿಶೀಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಿಮ್ಮ ನಿಗದಿತ ವೇಳಾಪಟ್ಟಿಯನ್ನು ತಿಳಿಯಲು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ನಿಮ್ಮ 12 ಅಂಕೆಯ ಪಡಿತರ ಚೀಟಿಯ ಸಂಖ್ಯೆಯನ್ನು SMS ಮೂಲಕ ಕಳುಹಿಸಿ ವಿವರಗಳನ್ನು ಪಡೆಯಬಹುದು. ಧನ್ಯವಾದಗಳು..