ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರವು 2023 ನೇ ಸಾಲಿನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ 5 ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನೀಡಿತ್ತು. ಈ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ ಇದರಲ್ಲಿ ರಾಜ್ಯದ ಪ್ರತಿ ಮಹಿಳೆಯರಿಗೆ ತಿಂಗಳಿಗೆ 2000 ದಂತೆ ಹಣವನ್ನು ನೀಡಲಾಗುತ್ತದೆ ಸದ್ಯ ಈ ಯೋಜನೆಯಲ್ಲಿ ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಪಲಾನುಭವಿಗಳಾಗಿದ್ದು ಈಗಾಗಲೇ ಕೆಲವು ತಿಂಗಳಿನ ಹಣ ಕೂಡ ಪಡೆದುಕೊಂಡಿದ್ದಾರೆ ಆದರೆ ಕೆಲವು ಮಹಿಳೆಯರಿಗೆ ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಹಾಗಾಗಿ ರಾಜ್ಯ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲದಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿ ಬಗ್ಗೆ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆ 2000 ಹಣ ಬರ್ತಿಲ್ವಾ.!
ರಾಜ್ಯದಲ್ಲಿ ಈಗಾಗಲೇ ತಿಳಿಸಿದ ಹಾಗೆ ಸುಮಾರು ಒಂದು ಕೋಟಿ 20 ಲಕ್ಷದಷ್ಟು ಮಹಿಳೆಯರು ಯೋಜನೆಯ ಫಲಾನುಭವಿಗಳಾಗಿದ್ದು ಇದರಲ್ಲಿ ಸುಮಾರು ಒಂದು ಕೋಟಿ 15 ಲಕ್ಷದಷ್ಟು ಮಹಿಳೆಯರು ಪ್ರತಿ ತಿಂಗಳು ಹಣ ಕೂಡ ಪಡೆದುಕೊಳ್ಳುತ್ತಿದ್ದಾರೆ ಆದರೆ ಕೆಲವು ಮಹಿಳೆಯರಿಗೆ ಇವರಿಗೂ ಕೂಡ ಹಣ ಬರ್ತಿಲ್ಲ. ಹಾಗಾಗಿ ಸರ್ಕಾರದಿಂದ ಈ ವಿಷಯವಾಗಿ ಮಹಿಳೆಯರಿಗೆ ಹಣ ಬಾರದೆ ಇರೋದಕ್ಕೆ ಕಾರಣ ಏನು ಎಂಬುದನ್ನು ಈಗಾಗಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ವಿವರಿಸಿದ್ದಾರೆ ಅಲ್ಲದೆ ಇದರಲ್ಲಿ ಬಹುತೇಕ ಮಹಿಳೆಯರು ಹಣ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಇನ್ನುಳಿದ ಕೆಲವು ಮಹಿಳೆಯರಿಗೆ ಸೂಕ್ತ ಪರಿಹಾರವನ್ನು ನೀಡುವುದಾಗಿ ತಿಳಿಸಿದ್ದಾರೆ ನಿಮಗೆ ಇನ್ನೂ ಕೂಡ ಹಣ ಬರುತ್ತಿಲ್ಲದಿದ್ದರೆ ಈ ಕೆಳಗೆ ತಿಳಿಸಲಾಗಿರುವ ನಿಯಮಗಳನ್ನು ಪಾಲಿಸಿದರೆ ಹಣ ನಿಮಗೂ ಸಿಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಪಡೆಯದವರ ಸಮಸ್ಯೆಗೆ ಸೂಕ್ತ ಪರಿಹಾರ.!
ಇತ್ತೀಚೆಗೆ ಬಂದಿರುವ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು ಒಂದು ಕೋಟಿ ಇಪ್ಪತ್ತು ಲಕ್ಷದಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು ಇದರಲ್ಲಿ ಒಂದು ಕೋಟಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪ್ರತಿ ತಿಂಗಳು 2000 ಹಾಡನ್ನು ಪಡೆದುಕೊಳ್ಳುತ್ತಿದ್ದಾರೆ ಇನ್ನು ಕೆಲವೇ ಮಹಿಳೆಯರು ಯೋಜನೆಯ ಹಣದಿಂದ ವಂಚಿತರಾಗಿದ್ದು ಇದು ಯಾವುದೇ ಯೋಜನೆಯ ವೈಫಲ್ಯದಿಂದ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಿಳಿಸಲಾಗಿದೆ. ಹೌದು ಬದಲಾಗಿ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಯಿಂದ ಉಳಿದ ಮಹಿಳೆಯರು ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ತಿಳಿಸಲಾಗಿದೆ ಹಾಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತೊಂದು ಕ್ಯಾಂಪ್ ಆಯೋಜಿಸಲು ಮುಂದಾಗಿದ್ದಾರೆ.
ಗೃಹಲಕ್ಷ್ಮಿ ಹಣ ವಂಚಿತರ ಸಮಸ್ಯೆಗೆ ಕ್ಯಾಂಪ್ ಆಯೋಜಿಸಿ ಪರಿಹಾರ.?
ಹೌದು ಈಗಾಗಲೇ ನವೆಂಬರ್ ತಿಂಗಳ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಇನ್ನು ಡಿಸೆಂಬರ್ ತಿಂಗಳ ಹಣವನ್ನು ಜನವರಿ 5ನೇ ದಿನದ ಒಳಗಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾರ್ಕರ್ ಅವರು ಮಾಹಿತಿ ನೀಡಿದ್ದಾರೆ ಇನ್ನು ಈಗಾಗಲೇ ತಾಂತ್ರಿಕ ಸಮಸ್ಯೆಯಿಂದ ವಂಚಿತರಾಗಿರುವ ಮಹಿಳೆಯರ ಸಹಾಯಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಂದಾಗಿದ್ದು ಯೋಜನೆಯ ಗೊಂದಲ ನಿವಾರಿಸಲು ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಿಸಲು ಸರ್ಕಾರ ಮುಂದಾಗಿದೆ ಗ್ರಾಮೀಣಾಭಿವೃದ್ಧಿಯ ಇಲಾಖೆಯ ಮೂಲಕ ಕ್ಯಾಂಪ್ ನಡೆಸಲಿದ್ದು ಪಿಡಿಒಗಳ ನೇತೃತ್ವದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಇಲಾಖೆ ಸೂಚಿಸಿದೆ.
ಹೌದು ಯೋಜನೆಯಿಂದ ವಂಚಿತರಾಗಿರುವಂತಹ ಮಹಿಳೆಯರಿಗೆ ಡಿಸೆಂಬರ್ 27ನೇ ದಿನಾಂಕದಿಂದ 29ನೇ ದಿನಾಂಕದವರೆಗೆ ಬೆಳಗ್ಗೆ ಒಂಬತ್ತು ಗಂಟೆಯಿಂದ ಸಂಜೆ 5:00 ವರೆಗೆ ಕ್ಯಾಂಪ್ ನಡೆಯಲಿದ್ದು ಅ ಕ್ಯಾಂಪ್ನಲ್ಲಿ ಸಂಬಂಧಪಟ್ಟ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಿ ಮತ್ತು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿ ಸಮಸ್ಯೆಗೆ ಪರಿಹಾರ ನೀಡಿ 2024ರ ಹೊಸ ವರ್ಷದಲ್ಲಿ ಸಿಹಿ ಸುದ್ದಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಧನ್ಯವಾದಗಳು… ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ