ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ನೇಮಕಕ್ಕೆ ಅಧಿಸೂಚನೆ.!

ಎಲ್ಲರಿಗೂ ನಮಸ್ಕಾರ..

ಬೆಂಗಳೂರು:  ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1000  ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA)  ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿ ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರರು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ನೀವು ಕೂಡ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದರೆ ಕಂದಾಯ ಇಲಾಖೆಯ ಈ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅಧಿಸೂಚನೆ.

ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಈಗಾಗಲೇ ತಿಳಿಸಿದ ಹಾಗೆ ಸುಮಾರು ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ,  ಹಾಗೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಹ ಅಭ್ಯರ್ಥಿಯು ಅರ್ಜಿ ಸಲ್ಲಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಡಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಸೂಚನೆ ನೀಡಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ವಿವರ.!

 ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸರ್ಕಾರದಿಂದ ನೀಡಲಾಗಿರುವ ಅಧಿಸೂಚನೆಯಂತೆ ಸುಮಾರು ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿದ್ದು ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಅಲ್ಲದೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ  ಪರೀಕ್ಷೆಯನ್ನು ನೀಡಲಿದ್ದು ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚಿಸಿದೆ ಅಲ್ಲದೆ ಪರೀಕ್ಷೆಯಲ್ಲಿ ಉತ್ತೀರ್ಣಾರದ ಅಭ್ಯರ್ಥಿಗಳಿಗೆ ನೇರವಾಗಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನು ನೀಡುವುದಾಗಿ ತಿಳಿಸಲಾಗಿದೆ ಇನ್ನು ಈಗಾಗಲೇ ತಿಳಿಸಿದ ಹಾಗೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯಲ್ಲಿ ಆದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವಿರುದ್ಧದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ ಸುಮಾರು ಸಾವಿರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ವೇತನ ಮತ್ತು ಶೈಕ್ಷಣಿಕ ವಿದ್ಯಾರ್ಹತೆ.?

ಕರ್ನಾಟಕ ರಾಜ್ಯ ಕಂದಾಯ ಇಲಾಖೆಗೆ ನೇಮಕಾತಿ ಮಾಡಿಕೊಳ್ಳಲಿರುವ ಗ್ರಾಮ ಆಡಳಿತ ಅಧಿಕಾರಿಗಳ ವೇತನ ಶ್ರೇಣಿಯು 21,400 ಗಳಿಂದ 42,000ಗಳ ವರೆಗೆ ಇರಲಿದೆ, ಹಾಗೂ ಈ ಹುದ್ದೆಯಲ್ಲಿ  ಗ್ರಾಮ ಆಡಳಿತ ಅಧಿಕಾರಿಗೆ NPS  ಪಿಂಚಣಿ ಸೌಲಭ್ಯವನ್ನು ಕೂಡ ನೀಡಲಾಗುವುದು ಎಂಬ ಮಾಹಿತಿಯನ್ನು ತಿಳಿಸಲಾಗಿದೆ ಹಾಗೂ ಈ ಉದ್ಯೋಗಕ್ಕೆ ಶೈಕ್ಷಣಿಕ ವಿದ್ಯಾರ್ಹತೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ  ವಿದ್ಯಾರ್ಹತೆ ಹೊಂದಿರಬೇಕು ಆದರೆ ಅರ್ಜಿ ಸಲ್ಲಿಸಲು ಕನಿಷ್ಠ 70 ರಿಂದ 75ರಷ್ಟು ಅಂಕವನ್ನು ಕಡ್ಡಾಯವಾಗಿ ಗಳಿಸಿರಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಯೋಮಿತಿ.?

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಕರ್ನಾಟಕ ಕಂದಾಯ ಇಲಾಖೆಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು ಪ್ರವರ್ಗ 2ಎ 2 ಬಿ ಮತ್ತು3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು,  ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿಯನ್ನು ನೀಡಲಾಗಿದೆ.

ಇನ್ನು ಹುದ್ದೆಗೆ ಅರ್ಜಿ  ಸಲ್ಲಿಸಲು KEA  ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿಯನ್ನು ಸಲ್ಲಿಸಲು KEA  ಅಧಿಕೃತ ವೆಬ್ಸೈಟ್ ಆದ  http://kea.kar.nic.in  ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಶುಲ್ಕ.?

ಈಗಾಗಲೇ ತಿಳಿಸಿದ ಹಾಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದ್ದು ದಿನಾಂಕ 4-3-2024 ರಿಂದ ಆರಂಭಗೊಳ್ಳಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3 4 2024 ಆಗಿರುತ್ತದೆ ಹಾಗೂ ಅರ್ಜಿಯ ಶುಲ್ಕವನ್ನು ಪಾವತಿಸಲು 6-4-2024 ಕೊನೆಯ ದಿನಾಂಕ ವಾಗಿರುತ್ತದೆ.

ಇನ್ನು ಅರ್ಜಿ ಶುಲ್ಕವು ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ ಅಂದರೆ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂಪಾಯಿ 750ಗಳು ಶುಲ್ಕ ಇರುತ್ತದೆ ನ್ನು  ಎಸ್ಸಿ  ಎಸ್ ಟಿ, ಪ್ರವರ್ಗ 1, ಮಾಜಿ ಸೈನಿಕರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಆಯ್ಕೆ ವಿಧಾನ.?

 ಈ ಹುದ್ದೆಗೆ ಈಗಾಗಲೇ ತಿಳಿಸಿದ ಹಾಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್ ನಲ್ಲಿ ಓಎಂಆರ್ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ತೆಗೆದಂತ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ ಧನ್ಯವಾದಗಳು..

Leave a Comment