ಎಲ್ಲರಿಗೂ ನಮಸ್ಕಾರ ಗೃಹಲಕ್ಷ್ಮಿ ಯೋಜನೆಯ ಹೊಸ ವರದಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಅಲ್ಲದೆ ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಹುದೊಡ್ಡ ಬದಲಾವಣೆಯನ್ನು ಮಾಡಿದ್ದು ಅರ್ಜಿ ಸಲ್ಲಿಸಿರುವ ಕೆಲ ಮಹಿಳೆಯರಿಗೆ ಉಚಿತ 2000 ಹಣ ಜಮಾ ಮಾಡುವಲ್ಲಿ ಸಮಸ್ಯೆ ಉಂಟಾಗಿದೆ ಸದ್ಯ ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರ ಅರ್ಜಿ ಸಲ್ಲಿಕೆ ಆಗಿದ್ದು ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 30ರ ನಂತರ ಗೃಹಲಕ್ಷ್ಮಿ ಯೋಜನೆಯ ಹಣವಾದ 2000 ಜಮಾವಾಗುತ್ತದೆ ಇದರ ಕುರಿತಾಗಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ತಿಯಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಬಹುದೊಡ್ಡ ಬದಲಾವಣೆ.
ಹೌದು ಗೃಹಲಕ್ಷ್ಮಿ ಯೋಜನೆಯ ಇದೆ ಆಗಸ್ಟ್ 30ನೇ ದಿನಾಂಕ ಚಾಲನೆ ನೀಡಲಿದ್ದು ಇದೀಗ ಯೋಜನೆಯಲ್ಲಿ ಮತ್ತೊಂದು ಬದಲಾವಣೆಯನ್ನು ಮಾಡಲಾಗಿದೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಇದರಲ್ಲಿ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಜಮಾ ಹಾಗುವುದರಲ್ಲಿ ಸಮಸ್ಯೆ ಇದೆ ಏಕೆಂದರೆ ಇದೀಗ ಯೋಜನೆಯಲ್ಲಿ ಮತ್ತಷ್ಟು ಕೆಲವು ನಿಯಮಗಳನ್ನು ಮಾಡಿದ್ದು ಈ ನಿಯಮಗಳ ಅನುಸಾರ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದು ಡೌಟ್.
ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ವೇದಿಕೆ ನಿರ್ಮಾಣ ಕಾಮಗಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದ್ದಾರೆ. ಸದ್ಯ ಮಹಿಳೆಯರಿಗೆ 200 ಆರ್ಥಿಕ ಸಹಾಯ ಧನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುತ್ತಿದ್ದು ಅಂದೆ ಮಹಿಳೆಯರ ಖಾತೆಗೆ 2000 ಜಮಾ ಆಗಲಿದೆ ಎಂದು ತಿಳಿಸಿದ್ದಾರೆ ಆದರೆ ಕೆಲವು ಮಹಿಳೆಯರಿಗೆ ಹಣ ಜಮಾ ಆಗುವುದರಲ್ಲಿ ಸಮಸ್ಯೆ ಉಂಟಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಈ ಮಹಿಳೆಯರಿಗೆ ಬರೋದಿಲ್ಲ.
ಹೌದು ಇದೆ ಆಗಸ್ಟ್ 30ನೇ ದಿನಾಂಕ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಲನೆಯ ಕಾರ್ಯಕ್ರಮದಲ್ಲಿ ಎಲ್ಲಾ ಮಹಿಳೆಯರಿಗೂ ಅಂದರೆ ಈವರೆಗೂ ಅರ್ಜಿ ಸಲ್ಲಿಸಿರುವ 1.30 ಕೋಟಿ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ 2,000 ಎಂದು ಹೇಳಲಾಗಿದ್ದು, 5 ಎಕರೆ ಮೇಲಿನ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ ಅಲ್ಲದೆ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬದವರಿಗೆ ಹಣ ನೀಡುವುದು ಬೇಡ ಹಾಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮತ್ತು ಇನ್ನಿತರ ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಉಚಿತ ಎರಡು ಸಾವಿರ ಹಣ ನೀಡುವುದನ್ನು ನಿರ್ಬಂಧಿಸಲು ಸರ್ಕಾರ ನಿಯಮವನ್ನು ಜಾರಿ ಮಾಡಲು ಮುಂದಾಗಿದೆ.
ಅಲ್ಲದೆ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿಸುತ್ತಿರುವ ಮನೆಯ ಮಹಿಳೆಯರಿಗೂ ಉಚಿತ ಎರಡು ಸಾವಿರ ನೀಡುವುದನ್ನು ನಿರ್ಭಂಧಿಸಲು ಮುಂದಾಗಿದೆ. ಅದೇ ರೀತಿ ಕೊನೆಯದಾಗಿ ಕಳೆದ ತಿಂಗಳ ಬಿಪಿಎಲ್ ರದ್ದಾದಂತಹ ಮನೆಯ ಯಜಮಾನರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದು ಡೌಟ್ ಅಲ್ಲದೆ ಈಗಾಗಲೇ ರಾಜ್ಯದಲ್ಲಿ ಸುಮಾರು 4.59 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರದಿಂದ ರದ್ದು ಮಾಡಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಗೂ ಮತ್ತಷ್ಟು ಕೆಲವು ನಿಯಮಗಳನ್ನು ತರುತ್ತಿದ್ದು ಅರ್ಜಿ ಸಲ್ಲಿಸಿರುವ 1.30 ಕೋಟಿ ಮಹಿಳೆಯರಲ್ಲಿ ಎಷ್ಟು ಮಹಿಳೆಯರಿಗೆ ಇದೇ ಆಗಸ್ಟ್ 30ನೇ ದಿನಾಂಕ 2,000 ಹಣ ಜಮಾ ಆಗಲಿದೆ ಎಂದು ಕಾದು ನೋಡಬೇಕಾಗಿದೆ ಅಲ್ಲದೆ ಕಾರು ಮತ್ತು ಆದಾಯ ತೆರಿಗೆ ಪಾವತಿಸುತ್ತಿರುವ ಹಾಗೂ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ಬಹಳಷ್ಟು ಜನರಿಗೆ ಕಳೆದ ತಿಂಗಳು ಪಡಿತರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆಯಾ ಎಂದು ಕಾದು ನೋಡಬೇಕಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ.
ಹಂತ ಒಂದು: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ. ನಂತರ ಮುಖಪುಟದ ಎಡಭಾಗದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ ನಂತರ ಡಿ ಬಿ ಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ಹಂತ ಎರಡು: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕ್ ಕ್ಲಿಕ್ ಮಾಡಿ.
ಹಂತ ಮೂರು: ನಂತರ ಕೆಳಗಿನ ಭಾಗದಲ್ಲಿರುವ ಡಿ ಬಿ ಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ ನಾಲ್ಕು: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಜಮಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು
ಹೀಗೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿನ ಕಡವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗೆ ಇದೆ ಎಂಬುದನ್ನು ಚೆಕ್ ಮಾಡಬಹುದು.