ಎಲ್ಲರಿಗೂ ನಮಸ್ಕಾರ…
ನಮ್ಮ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸುಮಾರು ಒಂದು ಕೋಟಿ 28 ಲಕ್ಷ ರೇಷನ್ ಕಾರ್ಡ್ ಗಳು ಇದ್ದು ಇವುಗಳಲ್ಲಿ ಈಗಾಗಲೇ ಐದರಿಂದ ಆರು ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಈಗಾಗಲೇ ರಾಜ್ಯ ಸರ್ಕಾರವು ಈ ಬಿಪಿಎಲ್ ಕಾರ್ಡ್ ವಿಚಾರವಾಗಿ ಕೆಲವು ಹೊಸ ನಿಯಮಗಳನ್ನು ಮತ್ತು ಕೆಲವು ಕಂಡಿಶನ್ ಗಳನ್ನು ರೇಷನ್ ಕಾರ್ಡ್ದಾರರಿಗೆ ಏರಿದೆ ಇದರ ಮಧ್ಯೆ ಇದೀಗ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಮತ್ತೊಂದು ಅವಕಾಶ ನೀಡಿದ್ದು ಹೊಸ ಅರ್ಜಿದಾರರಿಗೆ ಗುಡ್ ನ್ಯೂಸ್ ನೀಡಿದಂತಾಗಿದೆ ಹಾಗಾದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ ಶುರುವಾಗಲಿದೆ ಮತ್ತು ಕೊನೆಯ ದಿನಾಂಕ ಯಾವಾಗ ಏನಿಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಸಲು ನೀಡಬೇಕು ಎಂಬ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ ಬನ್ನಿ..
ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್.!
ಕರ್ನಾಟಕ ರಾಜ್ಯ ಸರ್ಕಾರದಿಂದ ಇದೀಗ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಅವರಿಗೆ ಮತ್ತೊಂದು ಅವಕಾಶ ನೀಡಲಿದೆ ಸದ್ಯ ಈಗಾಗಲೇ ರಾಜ್ಯದಲ್ಲಿ ಸರ್ಕಾರದ 5 ಗ್ಯಾರಂಟಿಗಳ ಚಾಲನೆಗಾಗಿ ಸರ್ಕಾರ ಶ್ರಮಿಸುತ್ತಿದ್ದು ಈಗಾಗಲೇ ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳು ಚಾಲನೆಯಾಗಿದೆ ಆದರೆ ಅದರಲ್ಲೂ ಕೆಲವು ಸಮಸ್ಯೆಗಳು ಉಂಟಾಗಿದ್ದು ಇದೀಗ ಈ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಸಂಬಂಧಪಟ್ಟ ಹಾಗೆ ಸರ್ಕಾರ ಕೆಲವು ಕ್ರಮಗಳನ್ನು ಜಾರಿ ಮಾಡಿದ್ದು ಈ ಕ್ರಮಗಳ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೆಲವು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಮತ್ತು ಕೆಲವು ರೇಷನ್ ಕಾರ್ಡ್ ಗಳನ್ನು ರೇಷನ್ ಕಾರ್ಡ್ ಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಆದೇಶ ನೀಡಿದ್ದು ಇವುಗಳ ಮಧ್ಯೆ ರಾಜ್ಯದ 2023 ನೇ ಸಾಲಿನ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದೆ.
ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಮತ್ತೊಂದು ಅವಕಾಶ ನೀಡಿದ ರಾಜ್ಯ ಸರ್ಕಾರ.
ಹೌದು ಈಗಾಗಲೇ ತಿಳಿಸಿದ ಹಾಗೆ ಈ ಒಂದು ಅನ್ನ ಭಾಗ್ಯ ಯೋಜನೆಗೆ ಸಂಬಂಧಪಟ್ಟ ಹಾಗೆ ಸರ್ಕಾರದಿಂದ ಕೆಲವು ಕಂಡಿಶನ್ಗಳನ್ನು ಜಾರಿ ಮಾಡಿದ್ದು ಈ ಕಂಡಿಶನ್ ಗಳ ಪ್ರಕಾರ ರಾಜ್ಯದಲ್ಲಿ ಅಕ್ರಮವಾಗಿ ಬಿಪಿಎಲ್ ಕಾಡುಗಳನ್ನು ಪಡೆದುಕೊಂಡಿರುವ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಅಲ್ಲದೆ ಕೆಲವು ಬಿಪಿಎಲ್ ಕಾರ್ಡ್ಗಳಿಗೆ ಇವರಿಗೂ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದರಿಂದ ಅಂತಹ ರೇಷನ್ ಕಾರ್ಡ್ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸೆಪ್ಟೆಂಬರ್ 10ನೇ ದಿನಾಂಕದವರೆಗೆ ಅವಕಾಶ ನೀಡಿತ್ತು ಆದರೆ ಇದೀಗ ಸೆಪ್ಟೆಂಬರ್ 30ರವರೆಗೆ ಮುಂದೂಡಲಾಗಿದೆ ಇದರ ಒಳಗಾಗಿ ಆಧಾರ್ ಲಿಂಕ್ ಮಾಡಿಸದಿದ್ದಲ್ಲಿ ಅಂತಹ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವುದಾಗಿ ಸರ್ಕಾರದಿಂದ ಎಚ್ಚರಿಕೆಯ ಆದೇಶವನ್ನು ಸಹ ಹೊರಡಿಸಲಾಗಿದ್ದು. ಇದೀಗ ಈ ಎಲ್ಲಾ ಕಾರ್ಯಗಳು ಮುಗಿದ ಬಳಿಕ ಇದೀಗ ಸರ್ಕಾರದಿಂದ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರೆಗೂ ಒಂದು ಅವಕಾಶ ನೀಡಿದೆ ಇದರಿಂದ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರು ಇನ್ನು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಬಹುದು..
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಲ್ಲಿ ಮತ್ತು ಯಾವಾಗ.?
ಈಗಾಗಲೇ ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ಹೊರಬಂದಿದ್ದು ಇನ್ನು ಕೆಲವೇ ದಿನಗಳಲ್ಲಿ ಅಂದರೆ ಇದೇ ಸೆಪ್ಟೆಂಬರ್ ಮೂರನೇ ವಾರದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ. ಮತ್ತು ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದು ಇನ್ನೂ ಸಹ ಆಧಾರ್ ಲಿಂಕ್ ಮಾಡಿಸಿಲ್ಲದಿದ್ದರೆ ಸೆಪ್ಟೆಂಬರ್ 30ನೇ ದಿನಾಂಕ ಕಡೆಯ ದಿನವಾಗಿದ್ದು ಇದರೊಳಗಾಗಿ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇನ್ನು ಕಡಿಮೆ ಕಾಲಾವಕಾಶವಿದ್ದು ಸರ್ಕಾರದಿಂದ ಅರ್ಜಿ ಸಲ್ಲಿಸಲು ಕೇಳುವ ಎಲ್ಲಾ ಮೂಲ ದಾಖಲೆಗಳನ್ನು ಹೊಂದಿಸಿ ಇಟ್ಟುಕೊಂಡು ಅರ್ಜಿ ಸಲ್ಲಿಸಲು ಸಿದ್ಧರಾಗಿರಿ ಎಂದು ಸರ್ಕಾರದಿಂದ ಸ್ಪಷ್ಟವಾಗಿ ತಿಳಿಸಲಾಗಿದೆ..
ಈಗಾಗಲೇ ರಾಜ್ಯದಲ್ಲಿ ಸುಮಾರು 80ರಷ್ಟು ಹಳೆಯ ಬಿಪಿಎಲ್ ಕಾರ್ಡ್ಗಳನ್ನು ಅಪ್ರೂವ್ ಮಾಡಿದ್ದು ಇನ್ನು 20% ಬಿಪಿಎಲ್ ಕಾಡುಗಳನ್ನು ರದ್ದು ಮಾಡಿದೆ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದರಿಂದ ಆದ್ದರಿಂದ ಒಂದು ವೇಳೆ ನಿಮ್ಮ ಬಿಪಿಎಲ್ ಕಾಡಿಗೆ ಆಧಾರ್ ಲಿಂಕ್ ಆಗಿಲ್ಲದಿದ್ದರೆ ಈ ಕೂಡಲೇ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಎಲ್ಲಿ ಮತ್ತು ಹೇಗೆ ಎಂದರೆ ನಿಮ್ಮ ಹತ್ತಿರದ ಸಹಾಯ ಸೇವ ಕೇಂದ್ರ ಕೆ ಭೇಟಿ ನೀಡಿ ಅಥವಾ ನಿಮ್ಮ ತಾಲೂಕು ಕಚೇರಿಯ ಆಹಾರ ಇಲಾಖೆಗೆ ಭೇಟಿ ನೀಡಿ ರೇಷನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಿಸಿ ಅಥವಾ ಹೊಸ ರೇಷನ್ ಕಾರ್ಡಿಗೆ ಅಲ್ಲೇ ಅರ್ಜಿ ಕೂಡ ಸಲ್ಲಿಸಬಹುದು.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?
ಇನ್ನು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಮೂಲ ದಾಖಲೆ ಬಗ್ಗೆ ಕೇಳುವುದಾದರೆ ನಿಮಗೆಲ್ಲ ಈಗಾಗಲೇ ತಿಳಿದಿರುವ ಹಾಗೆ ಯಾವುದೇ ಸರ್ಕಾರಿ ಯೋಜನೆಗಳು ಅಥವಾ ಸರ್ಕಾರಿ ಉಪಯೋಗಿ ಕಾರ್ಡುಗಳನ್ನು ಪಡೆಯಬೇಕು ಎಂದರೆ ಸಾಮಾನ್ಯವಾಗಿ ಈ ಎಲ್ಲಾ ಮಾಹಿತಿಗಳನ್ನು ಕಡ್ಡಾಯವಾಗಿ ಕೇಳುತ್ತಾರೆ ಅದೇ ದಾಖಲೆಗಳನ್ನು ಸಹ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕೇಳಲಾಗುತ್ತದೆ
- ಮೊದಲನೆಯದಾಗಿ ನಿಮ್ಮ ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್.
- ನಂತರ ನಿಮ್ಮ ಮನೆಯಲ್ಲಿ 18 ವರ್ಷ ಮೇಲ್ಪಟ್ಟವರಿದ್ದರೆ ಅವರ ವೋಟರ್ ಐಡಿ
- ಆದಾಯ ಮತ್ತು ಜಾತಿ ಪ್ರಮಾಣ ಪತ್ರ
- ಮನೆಯ ಸದಸ್ಯರ ಫೋಟೋ
- ಮೊಬೈಲ್ ನಂಬರ್
- ವಾಸ ದೃಢೀಕರಣ ಪತ್ರ
- ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಅರ್ಜಿ
- ಮತ್ತು ಇನ್ನಿತರ ಕೆಲವು ಮಾಹಿತಿಗಳನ್ನು ಕೇಳಲಾಗುತ್ತದೆ
ಎಲ್ಲ ಮಾಹಿತಿಗಳನ್ನು ಹೊಂದಿದ್ದರೆ ನೀವು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅದು ಕೂಡ ಇನ್ನು ಕೆಲವೇ ದಿನಗಳಲ್ಲಿ ಧನ್ಯವಾದಗಳು..