ಎಲ್ಲರಿಗೂ ನಮಸ್ಕಾರ….
ಕರ್ನಾಟಕ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ನೀಡುವ ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಹೌದು SSP ವಿದ್ಯಾರ್ಥಿ ವೇತನದಲ್ಲಿ ಪ್ರತಿ ವರ್ಷವೂ ಬಡ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಅಂದರೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ವರ್ಷವೂ ಕೂಡ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿ ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಒಂದಿಷ್ಟು ವಿದ್ಯಾರ್ಥಿ ವೇತನವನ್ನು ನೀಡಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದೆ. ಸದ್ಯ ಇದೀಗ 2023 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸುತ್ತಿದ್ದು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಈ ಎಲ್ಲಾ ಮಾಹಿತಿಗಳ ಬಗ್ಗೆ ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ.
SSP ವಿದ್ಯಾರ್ಥಿ ವೇತನಕ್ಕೆ ಸರ್ಕಾರ್ದಿಂದ ಅರ್ಜಿ ಆಹ್ವಾನ.?
ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಅನುಷ್ಠಾನ ಗೊಳಿಸಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಓದುತ್ತಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಇದು ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಮತ್ತು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಅನುಷ್ಠಾನಗೊಳಿಸಿದ ಯೋಜನೆಯಾಗಿದ್ದು ಇದರಿಂದ ಬಡ ಮಕ್ಕಳಿಗೆ ಆರ್ಥಿಕ ನೆರವಾಗಲು ಮತ್ತು ಮುಂದಿನ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಒಂದಿಷ್ಟು ಪ್ರೋತ್ಸಾಹವನ್ನು ಹೆಚ್ಚಿಸಲು ಈ ಯೋಜನೆಯನ್ನು ಜಾರಿಗೆ ತಂದಿದ್ದು ಹಿರಿಯ 2023 ನೇ ಸಾಲಿನ ಮೆಟ್ರಿಕ್ ಪೂರ್ವ ಅಂದರೆ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಸರ್ಕಾರ ಅವಕಾಶವನ್ನು ಕಲ್ಪಿಸಿದೆ.
ಅದೇ ರೀತಿ SSP ವಿದ್ಯಾರ್ಥಿ ವೇತನದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಆದರೆ ಸರ್ಕಾರದಿಂದ ಮೆಟ್ರಿಕ್ ಪೂರ್ವದ ವಿದ್ಯಾರ್ಥಿಗಳಿಗೆ ಕೆಲವು ದಿನಗಳ ಅರ್ಜಿ ಸಲ್ಲಿಸುವ ಅವಕಾಶ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕೆಲವು ದಿನಗಳ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ ಇದೀಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದ್ದು ಅರ್ಜಿ ಸಲ್ಲಿಸಲು ಅರ್ಹರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಈಗಾಗಲೇ ಅವಕಾಶವನ್ನು ನೀಡಿದ್ದು ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಸಕ್ತ ವಿದ್ಯಾರ್ಥಿಗಳು SSP ರಾಜ್ಯ ವಿದ್ಯಾರ್ಥಿವೇತನದ ಅಧಿಕೃತ ವೆಬ್ಸೈಟ್ ಆದ https://ssp.karnataka.gov.in ಗೆ ಭೇಟಿ ನೀಡಿ ಇದರಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಅಕ್ಟೋಬರ್ 20 ನೇ ದಿನಾಂಕ ಕೊನೆಯ ದಿನಾಂಕವಾಗಿದ್ದು ಇದರ ಒಳಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವು.?
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶವನ್ನು ಕಲ್ಪಿಸಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಈಗಲೇ ಅರ್ಜಿ ಸಲ್ಲಿಸಬಹುದು.
- ಈ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವು ಒಂದರಿಂದ 10ನೇ ತರಗತಿವರೆಗೂ ಸಲ್ಲಿಸಬಹುದಾದ ವಿದ್ಯಾರ್ಥಿ ವೇತನ ಆಗಿದ್ದು ಒಂದು ವೇಳೆ ನೀವು ಈಗಾಗಲೇ ಈ ಹಿಂದಿನ ವರ್ಷದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿದ್ದಾರೆ ಅದರಿಂದ ವಿದ್ಯಾರ್ಥಿ ವೇತನದ ಹಣವನ್ನು ಪಡೆದುಕೊಂಡಿದ್ದರೆ ಮತ್ತೆ ಆ ಅರ್ಜಿಯನ್ನೇ ಮರು ಅರ್ಜಿಯನ್ನಾಗಿ ದಿನಾಂಕವನ್ನು ಬದಲಾಯಿಸಿ ಅರ್ಜಿ ಸಲ್ಲಿಸಬಹುದು ಇದಕ್ಕೆ ಕೇವಲ ನಿಮ್ಮ ಈ ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಮಾತ್ರ ಪಡೆದು ಅರ್ಜಿ ಸಲ್ಲಿಸಲಾಗುತ್ತದೆ
- ನೀವೇನಾದರೂ ಈ ಬಾರಿ ಹೊಸದಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ಕಡ್ಡಾಯವಾಗಿ ಕೆಲವು ದಾಖಲಾತಿಗಳನ್ನು ನೀವು ನೀಡಲೇಬೇಕಾಗುತ್ತದೆ
- ಮೊದಲನೆಯದಾಗಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಕಡ್ಡಾಯ ಮತ್ತು ಅವರ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ
- ಎರಡನೆಯದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಬೇಕು ಮತ್ತು ಆ ಬ್ಯಾಂಕ್ ಪಾಸ್ ಬುಕ್ಕಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು
- ಅರ್ಜಿಯಲ್ಲಿ ಪೋಷಕರ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು
- ವಿದ್ಯಾರ್ಥಿಯ ಶಾಲೆಯ ಐಡಿ ಕಾರ್ಡ್ ನಂಬರ್ ಇರಬೇಕು ಮತ್ತು ಶಾಲೆಗೆ ನೋಂದಣಿಯಾದ ನೋಂದಣಿ ಸಂಖ್ಯೆಯನ್ನು ನಮೂದಿಸ ಬೇಕು.
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕು.
- ಕೊನೆಯದಾಗಿ ಈಗಾಗಲೇ ತಿಳಿಸಿದ ಹಾಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್ ಸೀಡಿಂಗ್ ಹಾಗೂ ಮ್ಯಾಪಿಂಗ್ ಆಗಿರುವಂತಹ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ಅರ್ಜಿ ಸಲ್ಲಿಸಲು ನೀಡಬೇಕು
- ಹಾಗೆ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಗುದ್ದಾಗಿ ಸಂಪರ್ಕಿಸಬಹುದು ಅಥವಾ ಈ 08282263761 ಸಂಪರ್ಕಿಸಬಹುದು ಧನ್ಯವಾದಗಳು.
- ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ