ಎಲ್ಲರಿಗೂ ನಮಸ್ಕಾರ..
Tata capital Pankh scholarship: ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವನೀಸಲಾಗಿದೆ. ಈಗಾಗಲೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಿಂದ ಬಹಳಷ್ಟು ಯೋಜನೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸಲಾಗಿದೆ ಅದರಲ್ಲಿ ಈ ವಿದ್ಯಾರ್ಥಿ ವೇತನದ ಸೌಲಭ್ಯ ಕೂಡ ಒಂದು, ಅಲ್ಲದೆ ಇದರ ಜೊತೆಗೆ ದೇಶದ ಪ್ರತಿಷ್ಠಿತ ಕಂಪನಿಗಳು ಕೂಡ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರತಿವರ್ಷವು ವಿದ್ಯಾರ್ಥಿ ವೇತನಗಳನ್ನು ನೀಡಿ ಅವರ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವನ್ನು ಉಂಟುಮಾಡುತ್ತಿದೆ ಅದೇ ರೀತಿ ದೇಶದ ಪ್ರತಿಷ್ಠಿತ ಕಂಪನಿ ಆದ ಟಾಟಾ ಕ್ಯಾಪಿಟಲ್ ಪಂಖ್ ದಿಂದ ಅರ್ಹ ಅಭ್ಯರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ.
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಆರ್ಥಿಕವಾಗಿ ದುರ್ಬಲರಾಗಿದ್ದರೆ ಗುಣಮಟ್ಟ ಮತ್ತು ಹೆಚ್ಚಿನ ಅಧ್ಯಯನಕ್ಕಾಗಿ ಈ ಹಣವನ್ನು ಬಳಸಬಹುದು ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ ಈ ಲೇಖನದಲ್ಲಿ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಯಾರೆಲ್ಲ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಈ ವಿದ್ಯಾರ್ಥಿ ವೇತನದಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಎಷ್ಟು ಹಣ ಸಿಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.?
ಈಗಾಗಲೇ ತಿಳಿಸಿದ ಹಾಗೆ ಟಾಟಾ ಕ್ಯಾಪಿಟಲ್ ಕಂಪನಿಯು ದೇಶದ ಪ್ರತಿಷ್ಠಿತ ಕಂಪನಿಯಾಗಿದ್ದು ಈ ಕಂಪನಿಯು ಕೂಡ ಪ್ರತಿ ವರ್ಷವೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಮತ್ತು ಉನ್ನತ ಶಿಕ್ಷಣ ಪಡೆಯಲು ಅನುಕೂಲ ಆಗುವಂತೆ ಆರ್ಥಿಕ ಸಹಾಯಧನವನ್ನು ನೀಡುತ್ತಿದೆ 2023 24ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಇದೀಗ ಟಾಟಾ ಕ್ಯಾಪಿಟಲ್ ಪಂಖ್ ಕಂಪನಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲು ಮುಂದಾಗಿದ್ದು ಇದೀಗ ಅರ್ಹತೆ ಕೊನೆಯ ದಿನಾಂಕ ಮತ್ತು ವಿದ್ಯಾರ್ಥಿ ವೇತನದ ಮೊತ್ತ ಇವುಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನದ ಅರ್ಹತೆ.?
, ಈ ವಿದ್ಯಾರ್ಥಿ ವೇತನ ಈಗಾಗಲೇ ತಿಳಿಸಿದ ಹಾಗೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಇನ್ನು ಇದಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ನಾಗರಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
- ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನದಲ್ಲಿ ಅರ್ಹ ಅಭ್ಯರ್ಥಿಗೆ 12,000 ವಿದ್ಯಾರ್ಥಿ ವೇತನ ಸಿಗಲಿದೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಮತ್ತು ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.
- ಭಾರತದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಭಾರತದಲ್ಲಿ ಮಾನ್ಯತೆ ಪಡೆದಿರುವ ಪದವಿಪೂರ್ವ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಿಎ, ಬಿಕಾಂ, ಬಿ ಎಸ್ ಸಿ, ಬಿ ಬಿಎ, ಬಿಬಿಎಂ ಇತ್ಯಾದಿ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಹಾಗೆ ಡಿಪ್ಲೋಮೋ ಅಥವಾ ಪಾಲಿಟೆಕ್ನಿಕ್ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ
- ಇನ್ನು ಈ ಯೋಜನೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕವನ್ನು ಗಳಿಸಿರಬೇಕು
- ಕೊನೆಯದಾಗಿ ಎಲ್ಲಾ ಮೂಲಗಳಿಂದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎರಡುವರೆ ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು ಅಂತಹ ವಿದ್ಯಾರ್ಥಿಗಳು ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿ ವೇತನಕ್ಕೆ ಅಗತ್ಯ ಇರುವ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ನ ಎರಡು ಫೋಟೋ
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿ ಇರುವಂತದ್ದು
- ವಾಸ ದೃಢೀಕರಣ ಪತ್ರ ಅಥವಾ ವಿಳಾಸದ ಪುರಾವೆ
- ಕಾಲೇಜಿನ ಪ್ರವೇಶ ಪ್ರಮಾಣ ಪತ್ರ ಅಂದರೆ ಅಡ್ಮಿಶನ್ ರಶೀದಿ
- ಪ್ರಸಕ್ತ ಶೈಕ್ಷಣಿಕ ವರ್ಷದ ಶುಲ್ಕ ರಶೀದಿ
- ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರ
- ಹಿಂದಿನ ವರ್ಷದ ಅಂಕಪಟ್ಟಿ
- ಕೊನೆಯದಾಗಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಪಡೆಯಲಾಗುತ್ತದೆ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ ಅರ್ಜಿ ಸಲ್ಲಿಸಲು ಇದೇ ನವೆಂಬರ್ 15ನೇ ದಿನಾಂಕ ಕೊನೆಯ ದಿನಾಂಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು Tata capital Pankh scholarship ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗೆ ಇದರಿಂದ ಪ್ರತಿ ವರ್ಷ 12000 ವಿದ್ಯಾರ್ಥಿ ವೇತನ ಸಿಗಲಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ