ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಜನವರಿ 12ರಂದು ಪದವೀಧರರಿಗೆ 3000 ಡಿಪ್ಲೋಮೋ ಹೊಂದಿರುವವರಿಗೆ 1500 ಸಿಗಲಿದೆ.?

ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಆಗಿರುವಂತಹ  ಯುವ ನಿಧಿ ಯೋಜನೆಯ ಅರ್ಜಿ ಸಲ್ಲಿಕೆಗೆ ಈಗಾಗಲೇ ಸರ್ಕಾರದಿಂದ ಚಾಲನೆ ನೀಡಲಾಗಿದೆ, ಹೌದು ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನೀಡಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ ನಂತರ  ನೀಡಿದ್ದ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಗ್ಯಾರೆಂಟಿ ಯೋಜನೆಗಳಿಗೆ ಚಾಲನೆ ನೀಡಿದ್ದು ಇದೀಗ ಕೊನೆಯ ಗ್ಯಾರಂಟಿ ಯೋಜನೆ ಆಗಿರುವಂತಹ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರದಿಂದ ಚಾಲನೆ ನೀಡಲಾಗಿದೆ.  ನೀವು ಕೂಡ ಪದವಿ ಅಥವಾ ಡಿಪ್ಲೋಮೋ ಹೊಂದಿದ್ದು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದರೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.!

 ಕರ್ನಾಟಕ ರಾಜ್ಯ ಸರ್ಕಾರದಿಂದ ಐದನೇ ಗ್ಯಾರಂಟಿ ಯೋಜನೆ ಆಗಿರುವಂತಹ  ಯುವ ನಿಧಿ ಯೋಜನೆಯ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಾಗಿದೆ ಈಗಾಗಲೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ನಾಲ್ಕು ದಿನಗಳು ಕಳೆದಿದ್ದು ಸದ್ಯ ಸುಮಾರು 20 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ  ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ,  ಇನ್ನು ಅರ್ಜಿ ಸಲ್ಲಿಕೆಗೆ ಕೇವಲ  2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ  ಹಾಗೆ ಕೆಲವೇ ದಿನಗಳಲ್ಲಿ ಯೋಜನೆಯ ಹಣ ಕೂಡ ಅಭ್ಯರ್ಥಿಗೆ  ಜಮಾ ಆಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 12ರಂದು ಪದವೀಧರರಿಗೆ 3000 ಡಿಪ್ಲೋಮೋ ಹೊಂದಿರುವವರಿಗೆ 1500 ಸಿಗಲಿದೆ.?

 ಯುವನಿಧಿ ಯೋಜನೆಯ ಅಡಿಯಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1500 ರೂಪಾಯಿಗಳನ್ನು ನಿರುದ್ಯೋಗ ಭತ್ಯೆ ಯಾಗಿ ನೀಡಲು ಸರ್ಕಾರ ನಿರ್ಧರಿಸಿದ್ದು ಈಗಾಗಲೇ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತಿದ್ದು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇದೇ ಜನವರಿ 12ನೇ ದಿನಾಂಕದಂದು ನಿರುದ್ಯೋಗ ಭತ್ಯೆ  ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುದಾಗಿ ಸರ್ಕಾರದಿಂದ ತಿಳಿಸಲಾಗಿದೆ. 

ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?

ಈ ಕುರಿತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು ಕರ್ನಾಟಕ ರಾಜ್ಯದ ಯೋಜನೆಯದ  ಯುವನಿಧಿ ಯೋಜನೆಯ ನೋಂದಣಿಗೆ ದಿನಾಂಕ 26.12.2023ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದರು ಎಂದಿದ್ದಾರೆ.  ಇದರಲ್ಲಿ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ದಾಖಲಿಸುವ ಪ್ರಕ್ರಿಯೆಯು ಆರಂಭಗೊಂಡಿದೆ ಈಗಾಗಲೇ ಪ್ರತಿದಿನ ಅರ್ಜಿ ಸಲ್ಲಿಸಲಾಗುತ್ತಿದ್ದು ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಅನುಕೂಲವನ್ನು ಸರ್ಕಾರದಿಂದ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. 

 20 22 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಪಾಸ್ ಮಾಡಿರುವ ಅಭ್ಯರ್ಥಿಗಳು ಯಾವುದೇ ಉನ್ನತ ಶಿಕ್ಷಣ ಪಡೆಯದೆ ಇದ್ದಲ್ಲಿ ಮತ್ತು ಯಾವುದೇ ಉದ್ಯೋಗ ಮಾಡದೆ ಇದ್ದಲ್ಲಿ ಸರ್ಕಾರದಿಂದ ನೀಡಲಾಗುತ್ತಿರುವ ಈ ನಿರುದ್ಯೋಗ ಪದ್ಯಯ ಹಣವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಈಗಾಗಲೇ ತಿಳಿಸಿದ ಹಾಗೆ ಹತ್ತಿರದ ಬೆಂಗಳೂರು ಒನ್ ಕೇಂದ್ರಕ್ಕೆ ಅಥವಾ ಗ್ರಾಮ ಕೇಂದ್ರ ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು  ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವವರು ಈಗಲೇ ಅರ್ಜಿ ಸಲ್ಲಿಸಿ ಇದರಿಂದ ನಿಮಗೆ ಜನವರಿ ತಿಂಗಳ ಮೊದಲ ಕಂತಿನ ಹಣ ಕೂಡ ಸಿಗಲಿದೆ ಧನ್ಯವಾದಗಳು .. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment